ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಮೃತ್ಯು
ಮಂಗಳೂರು:ಜೂ.7.ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ.
ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂ. 7ರ ಇಂದು ಬೆಳಗ್ಗೆ ಸಾವನ್ನಪ್ಪಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ ಸಿಗಬೇಕಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.