Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ, ಮೂವರ ದಾರುಣ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮುಂಜಾನೆ  ಆ್ಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಂಬ್ಯುಲೆನ್ಸ್ ನಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ.  ಅಹಮದಾಬಾದ್ ನಿಂದ ತಮಿಳುನಾಡಿಗೆ ಶವ ಸಾಗಿಸುವ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಆ್ಯಂಬುಲೆಬನ್ಸ್​ ಅಪಘಾತದಲ್ಲಿ ಜ್ಞಾನ ಶೇಖರ್ , ಮೌಳಿ ರಾಜನ್ ಎಂಬುವವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment