ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಧನ್ ಬಾದ್ : ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು, ಅನೇಕರು ಸಿಲುಕಿರುವ ಶಂಕೆ

ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಡೆದಿದೆ.

ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ, ಈಗಾಗಲೇ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಧನ್ ಬಾದ್​​ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (ಬಿಸಿಸಿಎಲ್) ಭೌರಾ ಕಾಲೇರಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಗಣಿ ಕುಸಿತವಾಗಿದೆ ಎಂದು ಹೇಳಿದ್ದಾರೆ.

.

 

No Comments

Leave A Comment