ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮುಂಬೈ – ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಹೊತ್ತಿ ಉರಿದ ಆಯಿಲ್ ಟ್ಯಾಂಕರ್, ನಾಲ್ವರು ಸಜೀವ ದಹನ
ಮುಂಬೈ: ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ – ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ” ಎಂದು ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಗೆಗೆ ಸಿಲುಕಿದ್ದ ಟ್ಯಾಂಕರ್ ಅನ್ನು ತೆರವುಗೊಳಿಸಿ, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ರಾಸಾಯನಿಕ ಪದಾರ್ಥ ತುಂಬಿದ್ದ ಟ್ಯಾಂಕರ್ ಉರುಳಿದ ಕೂಡಲೇ ಬೆಂಕಿ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ಯಾಂಕರ್‌ನ ಸಮೀಪದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೂ ಬೆಂಕಿ ತಗುಲಿತ್ತು. ಟ್ಯಾಂಕರ್‌ನಲ್ಲಿ ಸಂಗ್ರಹಿಸಿದ್ದ ರಾಸಾಯನಿಕಗಳು ಅತ್ಯಂತ ಸೂಕ್ಷ್ಮ ಪದಾರ್ಥಗಳಾಗಿದ್ದು, ಬೆಂಕಿ ತಗುಲುವ ಸಾಧ್ಯತೆ ಹೆಚ್ಚಾಗಿತ್ತು ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.