Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!

ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

No Comments

Leave A Comment