Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬ್ರೆಜಿಲ್‌ನ ವ್ಯಕ್ತಿ

ಲಂಡನ್‌: ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದು ಗಾಯ ಮಾಡಲಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಹೇಳಿದರು. ಇದೀಗ ಆಕೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್​​​ನಲ್ಲಿ ನಡೆದಿದೆ.

24 ವರ್ಷದ ಯುವಕ ಮತ್ತು 23 ವರ್ಷದ ಯವತಿಯನ್ನ ಈ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕ ಕಸ್ಟಡಿಯಲ್ಲಿದ್ದಾನೆ. ಆದರೆ ಆತನ ಜತೆಗೆ ಇದ್ದ ಯುವತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರ ಹೇಳಿಕೆ ತಿಳಿಸಿದೆ. ಇದೀಗ ಮತ್ತೊಬ್ಬ ಶಂಕಿತ 23 ವರ್ಷದ ಯುವಕನನ್ನೂ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ.

No Comments

Leave A Comment