Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಬೆಳ್ತಂಗಡಿ: ಮಹೇಶ್ ತಿಮರೋಡಿ ಪರ ಸ್ಟೇಟಸ್ ಹಾಕಿದಾತನಿಗೆ ಜಾತಿ ನಿಂದನೆ, ಹಲ್ಲೆ- ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಇಬ್ಬರ ಬಂಧನ

ಬೆಳ್ತಂಗಡಿ:ಜೂ .14: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂದಿತರನ್ನು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂದು ಗುರುತಿಸಲಾಗಿದ್ದು, ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕಾಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19)ರವರು ನೀಡಿದ ದೂರಿನಂತೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

No Comments

Leave A Comment