ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ : ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ ರದ್ದು ಮಾಡುವಂತೆ ಆದೇಶಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.