ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ : ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು:  ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ ರದ್ದು ಮಾಡುವಂತೆ ಆದೇಶಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

No Comments

Leave A Comment