ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.
ಎಎನ್‌ಐ ಜೊತೆ ಮಾತನಾಡಿದ ಸಿಂಗ್, ‘ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ’ ಎಂದಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, ‘ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು’ ಎಂದರು.
ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.