Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ತುಮಕೂರು: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು

ತುಮಕೂರು‌: ಕ್ಯಾಂಟರ್​ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ನಿನ್ನೆ ರಾತ್ರಿ ಆ್ಯಕ್ಸೆಲ್​ ಬ್ಲೇಡ್​ ಕಟ್ ಆಗಿ ಕ್ಯಾಂಟರ್​ರೊಂದು ಆಟೋಗೆ ಡಿಕ್ಕಿ ಹೊಡೆದಿದೆ.  ಈ ವೇಳೆ ಆಟೋದಲ್ಲಿದ್ದ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಶಾಂತಲಕ್ಷ್ಮೀ(30), ಪುತ್ರಿ ಚಿನ್ಮಯಿ(5) ಮೃತ ರ್ದುದೈವಿಗಳು. ಮೃತಪಟ್ಟವರು ತುಮಕೂರಿನ ಕುಂಟಮ್ಮದ ತೋಟದವರು ಎಂದು ಗುರುತಿಸಲಾಗಿದೆ. ಇವರು ಭೀಮಸಂದ್ರದಿಂದ ಮದುವೆ ಮುಗಿಸಿ ತುಮಕೂರು ನಗರಕ್ಕೆ ಬರುತ್ತಿದ್ದರು.

ಈ ವೇಳೆ ಸಡನ್ ಬ್ರೇಕ್ ಹಾಕಿದ ಕಾರಣ ಕ್ಯಾಂಟರ್​ನ ಆ್ಯಕ್ಸಲ್ ಕಟ್ಟಾಗಿ ಹೌಸಿಂಗ್ ಆಟೋಗೆ ಅಪ್ಪಳಿಸಿದೆ.  ಮೃತ ಶಾಂತಲಕ್ಷ್ಮೀಯ ಪುತ್ರ ತನ್ಮಯ್ ಹಾಗೂ ಆಟೋ ಚಾಲಕ ಗಿರೀಶ್​ಗೆ ಗಂಭೀರ ಗಾಯವಾಗಿದೆ.

ಗಾಯಾಳು ತನ್ಮಯ್​ಗೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಟೋಚಾಲಕ ಗಿರೀಶ್​ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment