ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ
ಮಂಗಳೂರು:ಜೂ 16.ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ