ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ, ಛತ್ತೀಸ್ಗಢದವರು 1.5 ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರ ಜೊತೆ ನಾನೇ ಮಾತನಾಡಿದ್ದೇನೆ. ಆದರೆ ಅವರು ಅಕ್ಕಿ ದಾಸ್ತಾನು ಇಲ್ಲವೆಂದಿದ್ದಾರೆ. ಹೀಗಾಗಿ ಆಂಧ್ರ ಸರ್ಕಾರದ ಜೊತೆ ಚರ್ಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದರು.
ಛತ್ತೀಸ್ಗಢದವರು 1.5 ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿಸಿದ್ದಾರೆ. ಆದರೆ ದರ ಸ್ವಲ್ಪ ದುಬಾರಿ ಆಗುತ್ತಿದೆ ಮತ್ತು ಸಾಗಣೆ ವೆಚ್ಚವೂ ಹೆಚ್ಚಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.