ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಅನ್ನಭಾಗ್ಯ ಯೋಜನೆ ತಂದಿಟ್ಟ ಸಂಕಷ್ಟ: ಅಕ್ಕಿ ಇಲ್ಲ ಎಂದ ತೆಲಂಗಾಣ, ಛತ್ತೀಸ್ಗಢದತ್ತ ಮುಖ ಮಾಡಿದ ರಾಜ್ಯ ಸರ್ಕಾರ!

ಬೆಂಗಳೂರು: 5 ಗ್ಯಾರಂಟಿ ಯೋಜನೆಗಳ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ತರುವುದು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕಕ್ಕೆ ನೀಡಲು ಅಗತ್ಯವಿರುವಷ್ಟು ಗುಣಮಟ್ಟದ ಅಕ್ಕಿಯ ದಾಸ್ತಾನು ಇಲ್ಲ ಎಂದು ನೆರೆಯ ತೆಲಂಗಾಣ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದು, ಇದೀಗ ಸರ್ಕಾರ ಛತ್ತೀಸ್ಗಢದತ್ತ ಮುಖ ಮಾಡಿದೆ.

ಅನ್ನಭಾಗ್ಯ ಯೋಜನೆ ಮಾಡಲು ರಾಜ್ಯ ಸರ್ಕಾರಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ಈ ಪೈಕಿ ಛತ್ತೀಸ್ಗಢದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿರುವುದಾಗಿ ತಿಳಿದುಬಂದಿದೆ. ಹೀಗಾಗಿ ಈ ಅಕ್ಕಿಯನ್ನು ಖರೀದಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 10ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಒಂದು ವೇಳೆ ಅಕ್ಕಿ ನೀಡಲು ಸಾಧ್ಯವಾಗದಿದ್ದರೆ, ಅಕ್ಕಿಯ ಪ್ರಮಾಣವನ್ನು ಇಳಿಸಿ, ಅದರ ಬದಲಾಗಿ ಜೋಳ ಮತ್ತು ರಾಗಿಯನ್ನು ಪರಿಹಾರವಾಗಿ ನೀಡುವ ಕುರಿತಂತೆಯೂ ಚಿಂತನೆಗಳು ನಡೆಯುತ್ತಿವೆ ಎಂದು ಮಲೂಗಳು ತಿಳಿಸಿವೆ.

ಈಗಾಗಲೇ ಸರ್ಕಾರ ಮುಖ್ಯಕಾರ್ಯದರ್ಶಿಗಳು ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸಿರುವುದರಿಂದ ಆ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯವಿಲ್ಲ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ ಮಾಡುವ ಅವಶ್ಯಕತೆಯೂ ಎದುರಾಗುವ ಸಾಧ್ಯತೆಗಳಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಸಾಕಷ್ಟು ಹಣವನ್ನು ಮೀಸಲಿಟ್ಟಿದ್ದಾರೆ. ‘ಅನ್ನ ಭಾಗ್ಯ’ ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದು ಶನಿವಾರ ಸಂಜೆ ಮುಖ್ಯಮಂತ್ರಿಗಳು ಮತ್ತು ಉನ್ನತಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ ನಂತರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಮಾಹಿತಿ ನೀಡಿದರು.

ಎಲ್ಲಾ ರಾಜ್ಯಗಳಿಂದರೂ ಮಾಹಿತಿ ಪಡೆಯುತ್ತಿದ್ದೇವೆ. ಅಕ್ಕಿ ಸಿಗುವ ಭರವಸೆಯಲ್ಲಿದ್ದೇವೆ. ಶೀಘ್ರದಲ್ಲೇ ಯೋಜನೆ ಜಾರಿಗೆ ದಿನಾಂಕ ಘೋಷಣೆ ಮಾಡುತ್ತೇವೆಂದು ಹೇಳಿದರು. ಇದೇ ವೇಳೆ ಅಕ್ಕಿ ಸಂಗ್ರಹ ಸಾಧ್ಯವಾಗದಿದ್ದರೆ, ಅಕ್ಕಿಯ ಬದಲಿಗೆ ಇತರೆ ಆಹಾರ ಧಾನ್ಯ ವಿತರಿಸುವ ಸುಳಿವನ್ನು ಸಚಿವರು ನೀಡದರು.

ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಛತ್ತೀಸ್‌ಗಢದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಮೊದಲಿಗೆ ತೆಲಂಗಾಣ ರಾಜ್ಯವನ್ನು ಸಂಪರ್ಕಿಸಿದ ಸಿದ್ದರಾಮಯ್ಯ ಅವರು, ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಖುದ್ದು ಮಾತುಕೆ ನಡೆಸಿದರು. ಆದರೆ, ಅಲ್ಲಿನ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವಷ್ಟು ಅಕ್ಕಿ ನಮ್ಮ ಬಳಿ ಇಲ್ಲ ಎಂದು ಹೇಳಿತ್ತು.

ಈ ನಡುವೆ ಕಮಿಷನ್ ಆಮಿಷಕ್ಕೊಳಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ ಎಂದಾದರೆ, ಅದನ್ನು ಲಭ್ಯವಾಗುವಂತೆ ಮಾಡಲಿ ಎಂದು ತಿರುಗೇಟು ನೀಡಿದರು.

No Comments

Leave A Comment