ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಶಿವಮೊಗ್ಗ: ಈಜಾಡಲು ತುಂಗಾ ನದಿಗೆ ಇಳಿದಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ.
ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ.
ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಈಜಾಡಲು ತುಂಗಾ ನದಿಗೆ ಇಳಿದ್ದರು.
ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಒಬ್ಬರ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.