ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಕಾಲು ಮುರಿದುಕೊಂಡ ನಟ ಜಗ್ಗೇಶ್!
ಇತ್ತೀಚೆಗೆ ನವರಸ ನಾಯಕ ಜಗ್ಗೇಶ್ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ.
ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್ ಮಾಡಿರುವ ಜಗ್ಗೇಶ್, “ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ. ಆರು ವಾರಗಳ ಕಾಲ ದಿಗ್ಭಂಧನ’ ಎಂದು ಬರೆದುಕೊಂಡಿದ್ದಾರೆ.
ಸದ್ಯ ವೈದ್ಯರ ಸಲಹೆಯಂತೆ ಜಗ್ಗೇಶ್ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದು, ಆದಷ್ಟು ಬೇಗ ಜಗ್ಗೇಶ್ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಾರೈಸುತ್ತಿದ್ದಾರೆ.