Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ: ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದರು.

ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

No Comments

Leave A Comment