ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ದೆಹಲಿ: ಜೋಡಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಬಂಧಿತರನ್ನು ಕಿಶನ್ ಚೌಧರಿ (27) ಮತ್ತು ಗಣೇಶ್ ಸ್ವಾಮಿ (39) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು 5 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಅರ್ಜುನ್, ಮಿಕಲ್ ಮತ್ತು ದೇವ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ಇಬ್ಬರು ಮಹಿಳೆಯರ ಗುಂಡಿಟ್ಟು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 27 ವರ್ಷದ ಕಿಶನ್ ಮತ್ತು 39 ವರ್ಷದ ಗಣೇಶ್ ಸ್ವಾಮಿ ಎಂಬುವವರನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಐವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಿದ್ದಾರೆ.

No Comments

Leave A Comment