`````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಓದುಗರಿಗೆ ಮತ್ತು ನಮ್ಮ ಜಾಹೀರಾತುದಾರರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು``````````````

ಪಾಲಕ್ಕಾಡ್‌ನಲ್ಲಿ ಸ್ಟೀಲ್ ಪ್ಲಾಂಟ್ ಸ್ಫೋಟ – ಓರ್ವ ಮೃತ್ಯು, ಮೂವರಿಗೆ ಗಾಯ

ಕೇರಳ:ಜೂ 20.ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,ಹಲವರಿಗೆ ಗಾಯಗೊಂಡ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ ಮಂಗಳವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಅರವಿಂದನ್(22) ಎಂದು ಗುರುತಿಸಲಾಗಿದ್ದು, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದು, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

No Comments

Leave A Comment