Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ದ.ಕ.ಕ್ಕೆ ಅತೀಕ್, ಉಡುಪಿಗೆ ಎಂ.ಟಿ ರೆಜು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ಮಂಗಳೂರು:ಜೂ 20. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿವಿಧ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಎಲ್​​.ಕೆ ಅತೀಕ್​ ಹಾಗೂ ಉಡುಪಿ ಜಿಲ್ಲೆಗೆ ಡಾ. ಎಂ.ಟಿ. ರೇಜು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಎಂ.ಟಿ. ರೇಜು ಈ ಹಿಂದೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದರು.

No Comments

Leave A Comment