ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಬೆಂಗಳೂರು: ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ ಅಭ್ಯರ್ಥಿಯಾಗಿ ತಿಪ್ಪಣ್ಣಪ್ಪ ಕಮಕನೂರು ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.