ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ನಂದಿನಿ ಹಾಲಿನ ದರ ಹೆಚ್ಚಳ ಪ್ರಸ್ತಾಪ: ಜನರ ಜೇಬಿಗೆ ಕನ್ನ- ಬಿಜೆಪಿ ಕಿಡಿ
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದೆ ಎಂದು ಕಿಡಿಕಾರಿದೆ.
ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದಲ್ಲಿ ಈಗಾಗಲೇ ದಿನ ಬಳಕೆ ಸಾಮಾಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದೆ. ಅಲ್ಲದೇ, ಈ ಜನದ್ರೋಹಿ ನಿರ್ಧಾರದಿಂದ ಸರ್ಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸಿದೆ.