Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

No Comments

Leave A Comment