ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ಜಗಳದಿಂದ ಬೇಸತ್ತು ಹೊಂಡಕ್ಕೆ ಹಾರಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ಸಾವು, ಅನಾಥರಾದ ಮಕ್ಕಳು!

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.

ಮೃತರನ್ನು ಯಶೋಧ ಹಾಗೂ ಇಮ್ಯಾನುವಲ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದ ಯಶೋಧ ತೋಟದಲ್ಲಿದ್ದ ಹೊಂಡಕ್ಕೆ ಹಾರಿದ್ದರು. ಈ ವೇಳೆ ಪತ್ನಿಯನ್ನು ರಕ್ಷಿಸಲು ಹೋಗಿದ್ದ ಇಮ್ಯಾನುವಲ್ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

No Comments

Leave A Comment