ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಕೆ.ಎಲ್.ರಾಹುಲ್: ವಿಶೇಷ ಉಡುಗೊರೆ ನೀಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ

ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ ಪ್ರತಿಮೆ ಹಾಗೂ ಬೆಳ್ಳಿ ನಾಣ್ಯ ನೀಡಿ ಗೌರವಿಸಿದರು. ಇದೇ ವೇಳೆ ರಾಹುಲ್, ವೀರೇಂದ್ರ ಹೆಗ್ಗಡೆ ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಐಪಿಎಲ್ 2023ರ ಸಂದರ್ಭದಲ್ಲಿ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಮೊಣಕಾಲಿಗೆ ಗಾಯವಾಗಿತ್ತು. ಇದರಿಂದಾಗಿ ಅರ್ಧದಲ್ಲೇ ಟೂರ್ನಿಯಿಂದ ಹೊರನಡೆದಿದ್ದರು. ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೂ ಅಲಭ್ಯರಾಗಿದ್ದರು. ನಂತರ ಅವರು ಲಂಡನ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಂಡಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

No Comments

Leave A Comment