Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಐಸಿಸಿ ವಿಶ್ವಕಪ್ 2023: ಅಧಿಕೃತ ವೇಳಾಪಟ್ಟಿ ಪ್ರಕಟ, ಅ.15ಕ್ಕೆ ಭಾರತ-ಪಾಕ್ ಪಂದ್ಯ

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

100%

ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ವಿರುದ್ಧ ಸೆಣೆಸಾಟ ನಡೆಯಲಿದೆ.

ಪಾಕಿಸ್ತಾನದ ಆಕ್ಷೇಪಗಳ ಹೊರತಾಗಿಯೂ, ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲೇ ನಡೆಯಲಿದೆ.

ಈ ಪಂದ್ಯವನ್ನು ಚೆನ್ನೈ, ಬೆಂಗಳೂರು ಅಥವಾ ಕೋಲ್ಕತ್ತಾಗೆ ಸ್ಥಳಾಂತರಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ, ಇದೀಗ ಅಂತಿಮವಾಗಿ ಅಹ್ಮದಾಬಾದ್​ನಲ್ಲೇ ನಡೆಸಲು ಒಪ್ಪಿಗೆ ನೀಡಲಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ 1,30,000 ಪ್ರೇಕ್ಷಕರಿಗೆ ಆತಿಥ್ಯ ವಹಿಸುತ್ತದೆ. ಇಲ್ಲಿ ಭಾರತ-ಪಾಕ್ ಪಂದ್ಯ ನಡೆದರೆ ಸ್ಟೇಡಿಯಂ ಹೌಸ್​ಫುಲ್ ಆಗಲಿದ್ದು, ಟಿಕೆಟ್​ಗಳಿಗೆ ಸಂಪೂರ್ಣ ಮಾರಾಟವಾಗುವ ನಿರೀಕ್ಷೆಯಿದೆ. ಹೀಗಾಗಿ ಬಿಸಿಸಿಐ ಅಥವಾ ಐಸಿಸಿ ಸ್ಥಳವನ್ನು ಬದಲಾಯಿಸಲು ಒಪ್ಪಿಲ್ಲ ಎಂದು ಹೇಳಲಾಗುತ್ತಿದೆ.

No Comments

Leave A Comment