ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಹಠಾತ್ ಪ್ರವಾಹ, ಭೂಸಿತ, 9 ಮಂದಿ ಸಾವು

ಚಂಡೀಗಢ: ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿಸೃ, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು,  ಪರಿಣಾಮ ಜನನಿಬಿಡ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಪರಿಣಾಮ ಪ್ರವಾಸಿಗರು ಸೇರಿದಂತೆ ನೂರಾರು ಜನರು ಮಂಡಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದು, ಇದರಿಂದಾಗಿ 70 ಕಿಮೀ ಮಂಡಿ-ಪಂಡೋಹ್-ಕುಲ್ಲು ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. . ಸೋಮವಾರ ಸಂಜೆ ವೇಳೆಗೆ ಹೆದ್ದಾರಿಯನ್ನು ಭಾಗಶಃ ವಾಹನ ಸಂಚಾರಕ್ಕೆ ತೆರೆಯಲಾಗಿದೆ ಎಂದು ಹೇಳಿದ್ದಾರೆ.

ಸಂಚಾರಕ್ಕೆ ಅಡ್ಡಿಯುಂಟು ಮಾಡಿರುವ ಭಾರೀ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳ ಬಳಸಲಾಗುತ್ತಿದೆ. ಭೂಕುಸಿತದಿಂದ ನಿರ್ಬಂಧಿಸಲ್ಪಟ್ಟ ಮಂಡಿ-ಕುಲು ಮಾರ್ಗವನ್ನು ಕೂಡ ಸುಮಾರು 20 ಗಂಟೆಗಳ ನಂತರ ತೆರೆಯಲಾಗಿದೆ.

ಭಾರೀ ಮಳೆಯಿಂದ ರಾಜ್ಯದಲ್ಲಿ ಒಟ್ಟು 301 ರಸ್ತೆಗಳು ಮುಚ್ಚಲ್ಪಟ್ಟಿದ್ದು, 140 ವಿದ್ಯುತ್ ಪರಿವರ್ತಕಗಳು ಸ್ಥಗಿತಗೊಂಡಿವೆ. ರಾಜ್ಯದಲ್ಲಿ ಒಂದು ಮೇಘಸ್ಫೋಟ, 7 ಭೂ ಕುಸಿತ ಮತ್ತು 4 ಪ್ರವಾಹ ಪರಿಸ್ಥಿತಿಗಳು ಎದುರಾಗಿದೆ. 9 ಮಂದಿಯ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ದಿದ್ದರೆ, ಮೂವರು ಮಳೆಯಿಂದಾಗಿ ಎದುರಾದ ರಸ್ತೆ ಅಫಘಾತದಲ್ಲಿ, ಉಳಿದವರು ಭೂ ಕುಸಿತ ಹಾಗೂ ಇನ್ನಿತರೆ ಮಳೆ ಅವಾಂತರ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾರೆಂದು ತಿಳಿಸಿದ್ದಾರೆ.

ಈ ನಡುವೆ ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ರಾಜ್ಯಕ್ಕೆ ಆರೆಂಜ್ ಅಲರ್ಟ್ ನೀಡಿದೆ. ಇದೇ ಪರಿಸ್ಥಿತಿ ಮುಂದಿನ 4-5 ದಿನಗಳ ವರೆಗೆ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿ ಹಾಗೂ ಹವಾಮಾನ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರವಾಸ ಯೋಜನೆ ಮಾಡುವಾದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹಿಮಾಚಲ ಪ್ರದೇಶದ ರಾಜ್ಯ ಸರ್ಕಾರ ಪ್ರವಾಸಿಗರಿಗೆ ಮನವಿ ಮಾಡಿಕೊಂಡಿದೆ.

ಈ ನಡುವೆ ರಾಜಸ್ಥಾನದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವುದು ಸೋಮವಾರ ವರದಿಯಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಗೆ ಮೋದಿಯವರ ಭೇಟಿಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.

No Comments

Leave A Comment