ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ದೇಶಾದ್ಯಂತ ಗಗನಕ್ಕೇರಿದ ಟೊಮೇಟೊ ಬೆಲೆ, ಇನ್ನಷ್ಟು ಹೆಚ್ಚಳ ಸಾಧ್ಯತೆ!

ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ಒಂದು ಕಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಕಾರಣದಿಂದಾಗಿ ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ.

ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈಸುಡುತ್ತಿದೆ. ಇದರಿಂದಾಗಿ ಜನರು ಟೊಮೇಟೊ ಬದಲಿಗೆ ಇತರೆ ಹುಳಿ ಪದಾರ್ಥಗಳತ್ತ ಚಿತ್ತ ಹರಿಸಿದ್ದಾರೆ.  ಚಿಲ್ಲರೆ ಅಂಗಡಿ, ಹೋಲ್‌ ಸೇಲ್‌ ಅಂಗಡಿಗಳಲ್ಲಿ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಹೌಹಾರುವಂತಾಗಿದೆ.

ಮೇ ಮತ್ತು ಜೂನ್ ತಿಂಗಳ ಆರಂಭದಲ್ಲಿ ಟೊಮೇಟೊಗೆ ಬೆಲೆ ಇರಲಿಲ್ಲ. ಆಗ ಕೆಜಿ ಟೊಮೇಟೊ ಕೇವಲ 30 ರಿಂದ 40 ರೂ.ಗೆ ಮಾರಾಟವಾಗಿತ್ತು. ಆದರೆ, ಕಳೆದ ಮೂರು ದಿನಗಳಿಂದ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ದೇಶಾದ್ಯಂತ ಬೆಲೆಯಲ್ಲಿಎರಡು ಪಟ್ಟು ಹೆಚ್ಚಳವಾಗಿದೆ. ಉತ್ತರ ಭಾರತದ ಕಡೆಗಳಲ್ಲಿ ಭಾರೀ ಮಳೆಯಿಂದ ಟೊಮೋಟೊ ನೆಲ ಕಚ್ಚಿದ್ದರೆ, ಕರ್ನಾಟಕ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಳೆ ವಿಳಂಬ, ಅತಿಯಾದ ಉಷ್ಣಾಂಶ ಬೆಳೆ ಇಳುವರಿ ಕುಸಿತಕ್ಕೆ ಕಾರಣವಾಗಿದೆ. ಈ ಬೆಲೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.

No Comments

Leave A Comment