ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಅನ್ನಭಾಗ್ಯ ಯೋಜನೆ: ಜುಲೈನಿಂದಲೇ 5 ಕೆಜಿ ಅಕ್ಕಿ ಬದಲಿಗೆ, ಹಣ ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಖಾತರಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ ಅಕ್ಕಿ ಜೊತೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಜುಲೈನಿಂದಲೇ ಹಣ ಪಾವತಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

FCI (ಭಾರತೀಯ ಆಹಾರ ನಿಗಮ) ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳ ಪ್ರಮಾಣಿತ ದರವನ್ನು ನಿಗದಿಪಡಿಸಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗೆ 34 ರುಪಾಯಿ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.

ಪಡಿತರ ಚೀಟಿಯಲ್ಲಿ ಇಬ್ಬರಿದ್ದರೆ ಅವರು 340 ರೂ.ಗೆ ಅರ್ಹರಾಗಿರುತ್ತಾರೆ. ಇನ್ನು ಐವರು ಸದಸ್ಯರಿದ್ದರೆ ಅವರಿಗೆ ತಿಂಗಳಿಗೆ 850 ರೂಪಾಯಿಯನ್ನು ನೀಡಲಾಗುತ್ತದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಇದು ಜುಲೈ 1ರಿಂದಲೇ ಜಾರಿಗೆ ಬರಲಿದೆ ಎಂದು ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು.

No Comments

Leave A Comment