ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮುಂಬೈನಲ್ಲಿ ಭಾರೀ ಮಳೆ, ಮರ ಬಿದ್ದು ಇಬ್ಬರು ಸಾವು

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು,  ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಪಕ್ಕದ ಥಾಣೆಯಲ್ಲಿ, ಮಂಗಳವಾರ ಸಂಜೆ ಒಂದು ಅಂತಸ್ತಿನ ‘ಚಾಲ್'(ಹಳೆಯ ವಠಾರ)ನ ಒಂದು ಭಾಗ ಕುಸಿದು 36 ವರ್ಷದ ಮಹಿಳೆ ಗಾಯಗೊಂಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಮುಂಬೈನಲ್ಲಿ ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

No Comments

Leave A Comment