ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ; ಮಾರ್ಗ ಮಧ್ಯೆ ಸಿಲುಕಿದ ಯಾತ್ರಾರ್ಥಿಗಳು

ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ.

ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಗೆ ಯಾತ್ರೆ ಕೈಗೊಂಡಿದ್ದರು.

ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅವಶೇಷಗಳನ್ನು ತೆರವುಗೊಳಿಸಲು ಮತ್ತು ಮಾರ್ಗದಲ್ಲಿ ಸಂಚಾರವನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಚಮೋಲಿ ಆಡಳಿತವು ಸಿಕ್ಕಿಬಿದ್ದ ಯಾತ್ರಾರ್ಥಿಗಳಿಗೆ ಕುಡಿಯುವ ನೀರು ಮತ್ತು ತಿಂಡಿಗಳನ್ನು ವಿತರಿಸಿದೆ. ಚಮೋಲಿ ಜಿಲ್ಲೆಯ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆಯಾಗಿದೆ.

No Comments

Leave A Comment