
ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ; ಮಾರ್ಗ ಮಧ್ಯೆ ಸಿಲುಕಿದ ಯಾತ್ರಾರ್ಥಿಗಳು
ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ.
ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಗೆ ಯಾತ್ರೆ ಕೈಗೊಂಡಿದ್ದರು.