Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ವಿಜಯಪುರ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣ

ಹೊಸಪೇಟೆ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಐವರು ಮಹಿಳೆಯರು ಇಬ್ಬರು ಪುರುಷರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಆಟೋಗಳಲ್ಲಿ 19 ಮಂದಿ ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತ ಬಳಿಕ ಲಾರಿಯನ್ನು ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

No Comments

Leave A Comment