ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮಣಿಪುರದಲ್ಲಿ ಜುಲೈ 8 ರವರೆಗೂ ಶಾಲೆಗಳು ಬಂದ್

ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದ್ದು, ಜುಲೈ 8 ರವರೆಗೂ ರಾಜ್ಯದ ಎಲ್ಲಾ ಶಾಲೆಗಳ ಸಾಮಾನ್ಯ ತರಗತಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಆದೇಶದಲ್ಲಿ, “ರಾಜ್ಯದ ಎಲ್ಲಾ ಶಾಲೆಗಳಿಗೆ ಸಾಮಾನ್ಯ ತರಗತಿಗಳ ಪುನರಾರಂಭ ದಿನಾಂಕ 19-06-2023ರ ಆದೇಶದಂತೆ, 08-07-2023 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ”.

“ಶಿಕ್ಷಣ ಇಲಾಖೆ-ಶಾಲೆಗಳು, ಮಣಿಪುರದ ಎಲ್ಲಾ ವಲಯ ಶಿಕ್ಷಣ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಲವು ಸ್ಥಳಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಳೆದ 24 ಗಂಟೆಗಳಲ್ಲಿ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ. ಆದರೆ ಹೆಚ್ಚಿನ ಜಿಲ್ಲೆಗಳು ಸಹಜ ಸ್ಥಿತಿಗೆ ಮರಳಿವೆ ಮಣಿಪುರ ಪೊಲೀಸರು ಗುರುವಾರ ತಿಳಿಸಿದ್ದಾರೆ.

No Comments

Leave A Comment