ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶಿಸ್ತು ಸಮಿತಿ ನೊಟೀಸ್ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ; ಸುದೀರ್ಘ ಮಾತುಕತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ..

ಇದರ ಬೆನ್ನಲ್ಲೇ ಇಂದು (ಶನಿವಾರ) ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್​​ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನಿನ್ನೆ (ಶುಕ್ರವಾರ) ಬಿಜೆಪಿ ನಾಯಕರರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುವವರನ್ನು ಕರೆದು ಮಾತನಾಡುವ ಜವಾಬ್ದಾರಿಯನ್ನು ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೀಡುವ ನಿರ್ಣಯವನ್ನು ಕೈಗೊಂಡಿತ್ತು.

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು.

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

kiniudupi@rediffmail.com

No Comments

Leave A Comment