ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಬರದ ಭೀತಿಯ ನಡುವೆಯೇ ಜಲಪ್ರಳಯದ ಎಚ್ಚರಿಕೆ ಕೊಟ್ಟ ಕೋಡಿಮಠ ಶ್ರೀ!

ಹುಬ್ಬಳ್ಳಿ: ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜನರ ಅಕಾಲ ಮೃತ್ಯು ಸಂಭವಿಸುವ ಸಾಧ್ಯತೆ ಇದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ ಮಟ್ಟದಲ್ಲಿ ಜಲಪ್ರಳಯ ಸಂಭವಿಸಿ ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ. ಬೇರೆ ಎಲ್ಲೋ ಕಡೆ ಬಾಂಬ್ ಸ್ಫೋಟದಂತಹ ಘಟನೆಗಳು ಸಂಭವಿಸುತ್ತವೆ. ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವಿಗೀಡಾಗುವ ಸಂಭವ ಇದೆ’ ಎಂದರು.

‘ವಿಜಯದಶಮಿಯಿಂದ ಸಂಕ್ರಾಂತಿಯೊಳಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುವಂತ ದುರ್ಘಟನೆ ರಾಷ್ಟ್ರ ಮಟ್ಟದಲ್ಲಿ ನಡೆಯಲಿದೆ. ಆಳುವವರು ಅರಿತರೆ ಗಂಡಾಂತರದಿಂದ ಪಾರಾಗಬಹುದು. ಇಲ್ಲದಿದ್ದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಕರುನಾಡಿಗೂ ಕೆಲವು ಆಪತ್ತುಗಳು ಇದ್ದು, ಸಾವು ನೋವುಗಳು ಸಂಭವಿಸಲಿವೆ. ದೈವಕೃಪೆಯಿಂದ ಇವೆಲ್ಲವುಗಳಿಂದ ಪಾರಾಗಬಹುದು. ಭಾರತದಲ್ಲಿಯೂ ಒಂದು ಘಟನೆ ಆಗುತ್ತೆ. ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ’ ಎಂದು ಹೇಳಿದರು.

ಬಡವರಿಗೆ ಗ್ಯಾರಂಟಿಗಳು ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರ್ಲಿಲ್ಲ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸತ್ರ ಅಪ್ರಿಯವಾಗಿರುತ್ತದೆ. ಸುಳ್ಳು ಪ್ರಿಯವಾಗಿರುತ್ತದೆ. ನಾನು ಸತ್ಯ ಹೇಳಿದರೆ ಮಠಕ್ಕೆ ಹೋಗುವುದಿಲ್ಲ. ಸಂದರ್ಭ ಬಂದಾಗ ಈ ಬಗ್ಗೆ ಹೇಳುತ್ತೇನೆ ಎಂದರು.

kiniudupi@rediffmail.com

No Comments

Leave A Comment