ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಖ್ಯಾತ ಬಾಡಿಬಿಲ್ಡರ್ ಜೋ ಲಿಂಡ್ನರ್‌ ನಿಧನ

ಬ್ಯಾಂಕಾಕ್‌: ಬಾಡಿಬಿಲ್ಡರ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಖ್ಯಾತರಾಗಿದ್ದ ಜೋ ಲಿಂಡ್ನರ್‌ (30) ನಿಧನರಾಗಿದ್ದಾರೆ.

ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಜೋ ಲಿಂಡ್ನರ್‌ ಅವರು ಶನಿವಾರ ನಿಧನರಾಗಿದ್ದಾರೆ ಎಂದು ಅವರ ಗೆಳತಿ ನಿಚಾ ಅವರು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

2 ದಿನಗಳ ಹಿಂದೆಯಷ್ಟೇ ಆರೋಗ್ಯಕರ ದೇಹದಾರ್ಢ್ಯ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದ ಜೋ ಲಿಂಡ್ನರ್‌ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್‌ ಕುರಿತ ಹಲವು ವಿಡಿಯೋ ಹಂಚಿಕೊಂಡಿದ್ದರು.

ಪ್ರತಿದಿನ ಯುಟ್ಯೂಬ್‌ನಲ್ಲಿ ಫಿಟ್ನೆಸ್‌ ತರಬೇತಿ, ಆಹಾರ ಕ್ರಮದ ಬಗ್ಗೆಯೂ ಸಲಹೆ ನೀಡುತ್ತಿದ್ದ ಜೋ ಲಿಂಡ್ನರ್‌ ಅವರು, ಯುಟ್ಯೂಬ್‌ನಲ್ಲಿ 9,40,000 ಚಂದಾದಾರರು ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ 8.5 ದಶಲಕ್ಷ ಫಾಲೋವರ್ಸ್‌ ಗಳನ್ನ ಹೊಂದಿದ್ದಾರೆ.

No Comments

Leave A Comment