Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ವಿಧಾನ ಪರಿಷತ್​ ಸದಸ್ಯರಾಗಿ ಕಾಂಗ್ರೆಸ್​ನ ಮೂವರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು  ಅವರು ಪ್ರಮಾಣವಚನ ಸ್ವೀಕರಿಸಿದರು.

ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಇದ್ದರು.

ಈ ನಡುವೆ ವಿಧಾನಮಂಡಲ​​​ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದು, ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.

No Comments

Leave A Comment