Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬಿಟ್ ಕಾಯಿನ್ (Bitcoin scam) ಹಗರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮರುಜೀವ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣ ಬಗ್ಗೆ ವಿಶೇಷ ತನಿಖಾ ತಂಡದಿಂದ(SIT probe)l ಮರು ತನಿಖೆ ಆದೇಶ ನೀಡಿದೆ.

ಪ್ರಕರಣದ ಮೊದಲ ಹಂತವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸರ್ಕಾರ ಮರು ತನಿಖೆಗೆ ಆಗ್ರಹಿಸಿದೆ.

ಎಡಿಜಿಪಿ ಮನೀಶ್ ಕರ್ಬಿಕರ್ ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಹಗರಣವಾಗಿದ್ದ ಬಗ್ಗೆ ಆರೋಪ ಮಾಡಿದ್ದೆವು. ಇದೀಗ ಬಿಟ್ ಕಾಯಿನ್ ಪ್ರಕರಣ ಮರು ತನಿಖೆಗೆ ಅದೇಶಿಸಿದ್ದೇವೆ ಎಂದರು. ಸಿಐಡಿ ಅಡಿಯಲ್ಲಿ SIT ರಚನೆ ಮಾಡಿದ್ದೇನೆ. ಸರ್ಕಾರದ ರಿಲೆಟೆಡ್ ಆದೇಶಗಳನ್ನ ಮಾಡುತ್ತೇವೆ ಎಂದರು.

No Comments

Leave A Comment