ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ದೆಹಲಿಯಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ, ಕೆಜಿಗೆ 140 ರೂ.!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ  ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ.

ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು ಅವಲಂಬಿಸಿ ಕೆಜಿಗೆ 60-120 ರೂ.ವರೆಗೆ ಮಾರಾಟವಾಗಿದೆ.

ಪ್ರಮುಖ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಕಡಿಮೆಯಾದ ಕಾರಣ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದೆ. ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಆಜಾದ್‌ಪುರ ಟೊಮೆಟೊ ಸಂಘದ ಅಧ್ಯಕ್ಷ ಅಶೋಕ್ ಕೌಶಿಕ್ ಪಿಟಿಐಗೆ ತಿಳಿಸಿದ್ದಾರೆ.

No Comments

Leave A Comment