Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಆಡಳಿತ-ವಿಪಕ್ಷಗಳ ಗದ್ದಲ: ಬೆಳಗ್ಗೆ ಸಿಎಂ, ಸ್ಪೀಕರ್ ಭೇಟಿ ಮಾಡಿದ ಬೊಮ್ಮಾಯಿ-ಸುನಿಲ್ ಕುಮಾರ್, ಪರಿಷತ್ ಕಲಾಪ ಮುಂದೂಡಿಕೆ

ಬೆಂಗಳೂರು: ಇತ್ತ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರು ಕದನ ಮುಂದುವರಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರೂ, ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೂ ಅತ್ತ ಆಡಳಿತ, ವಿಪಕ್ಷ ನಾಯಕರು ಒಟ್ಟು ಸೇರಿ ಖುಷಿಯಿಂದ ಸಮಯ ಕಳೆದಿದ್ದಾರೆ.

ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ವಿ ಸುನಿಲ್ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಾಯಕರು ನಗುತ್ತಾ ಕುಳಿತಿರುವ ಫೋಟೋ ವೈರಲ್ ಆಗಿದೆ.

ಗದ್ದಲಕ್ಕೆ ಸಭೆ ಕರೆದ ಸ್ಪೀಕರ್: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಆಡಳಿತ ಮತ್ತು ವಿಪಕ್ಷ ಮಧ್ಯೆ ಗದ್ದಲವನ್ನು ಶಮನಗೊಳಿಸಲು ಸ್ಪೀಕರ್ ಅವರು ಆಡಳಿತ ಮತ್ತು ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment