ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಪ್ರಕರಣ: ಅನಿಲ್ ಅಂಬಾನಿ ಪತ್ನಿ ಟೀನಾ ಇಡಿ ವಿಚಾರಣೆಗೆ ಹಾಜರು

ಮುಂಬೈ: ಭಾರತದ ನಂಬರ್ ಒನ್ ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.

ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅನಿಲ್ ಅಂಬಾನಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಟೀನಾ ಅಂಬಾನಿ ಇಂದು ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇದು ಅಂಬಾನಿ ಕಂಪನಿಗಳಲ್ಲಿನ ಹೂಡಿಕೆಗೆ ಸಂಬಂಧಿಸಿದ ಹೊಸ ಪ್ರಕರಣ ಎಂದು ಮೂಲಗಳು ತಿಳಿಸಿವೆ.

ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಅನಿಲ್ ಅಂಬಾನಿ ಅವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿತ್ತು.

ಇದೀಗ ಫಾರೀನ್ ಎಕ್ಸ್​ಚೇಂಜ್ ನಿಯಮಗಳ ಉಲ್ಲಂಘನೆಯ ಆರೋಪಗಳಿರುವ ಹೊಸ ಪ್ರಕರಣವೊಂದು ದಾಖಲಾಗಿದ್ದು, ಆ ಸಂಬಂಧ ಅನಿಲ್ ಅಂಬಾನಿ ಮತ್ತು ಈಗ ಟೀನಾ ಅಂಬಾನಿ ವಿಚಾರಣೆ ನಡೆಯುತ್ತಿದೆ.

No Comments

Leave A Comment