ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿದ್ದ ಹೋಟೆಲ್‌ಗೆ ಡಿಕ್ಕಿಯಾದ ಟ್ರಕ್, 10 ಮಂದಿ ದುರ್ಮರಣ

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಬೆಳಿಗ್ಗೆ 10.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬ್ರೇಕ್ ವಿಫಲವಾದ ನಂತರ ಚಾಲಕ ನಿಯಂತ್ರಣ ಕಳೆದುಕೊಂಡ ಟ್ರಕ್‌, ಹಿಂಬದಿಯಿಂದ ಎರಡು ದ್ವಿಚಕ್ರ ವಾಹನಗಳು, ಒಂದು ಕಾರು ಮತ್ತು ಇನ್ನೊಂದು ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ.  ನಂತರ ಟ್ರಕ್ ಹೆದ್ದಾರಿಯಲ್ಲಿ ಬಸ್ ನಿಲ್ದಾಣದ ಬಳಿಯಲ್ಲಿದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದರು.

ಟ್ರಕ್ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಹೋಗುತ್ತಿತ್ತು. ಸಂತ್ರಸ್ತರಲ್ಲಿ ಹಲವರು ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದವರು ಸೇರಿದ್ದಾರೆ ಎಂದು ಅವರು ಹೇಳಿದರು.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಶಿರ್‌ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment