ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....
ICC Ranking: ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ ಗೆ ಆಘಾತ; ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ 716 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಸ್ಮೃತಿ ಅವರಿಗಿಂತ ಎರಡು ಅಂಕ ಕಡಿಮೆ ಹೊಂದಿದ್ದಾರೆ.
ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಟಪಟ್ಟು 758 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಆಟಗಾರ್ತಿ. ಬೌಲಿಂಗ್ ವಿಭಾಗದಲ್ಲಿ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ (617 ಅಂಕ) ಮತ್ತು ಹಿರಿಯ ಆಫ್ ಸ್ಪಿನ್ನರ್ ದೀಪ್ತಿ ಶರ್ಮಾ ಕ್ರಮವಾಗಿ ಎಂಟು ಮತ್ತು 10 ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ 751 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಭಾರತದ ದೀಪ್ತಿ 322 ಅಂಕಗಳೊಂದಿಗೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಸ್ಮೃತಿ 722 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದೀಪ್ತಿ ಬೌಲಿಂಗ್ ಪಟ್ಟಿಯಲ್ಲಿ 729 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ಒಂದು ಸ್ಥಾನ ಗಳಿಸಿದ್ದಾರೆ. ರೇಣುಕಾ 700 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆದರೆ, ದೀಪ್ತಿ 393 ಅಂಕಗಳೊಂದಿಗೆ ಆಲ್ ರೌಂಡರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಏತನ್ಮಧ್ಯೆ, ಚಾಮರಿ ಮಹಿಳಾ ಏಕದಿನ ಆಟಗಾರ್ತಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ತಲುಪಿದ ಲಂಕಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ICC ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ, ನ್ಯೂಜಿಲೆಂಡ್ ವಿರುದ್ಧ ತನ್ನ ತಂಡದ 2-1 ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಅವರನ್ನು ಸರಿಸಮನಾಗಿ ಏಕದಿನ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದರು ಶ್ರೀಲಂಕಾದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜಯಸೂರ್ಯ ಸೆಪ್ಟೆಂಬರ್ 2002ರಿಂದ ಮೇ 2003ರವರೆಗೆ 181 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು.
ಚಾಮರಿ 758 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇದು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೀಲಂಕಾದ ಮಹಿಳಾ ಆಟಗಾರ್ತಿಯ ಗರಿಷ್ಠ ರೇಟಿಂಗ್ ಆಗಿದೆ. ಅವರ ನಂತರ 587 ಅಂಕಗಳನ್ನು ಗಳಿಸಿದ ದೇಬುನು ಸಿಲ್ವಾ ಅವರ ಸಂಖ್ಯೆ ಬರುತ್ತದೆ. ಅವರು ಏಪ್ರಿಲ್ 2010ರಲ್ಲಿ 11ನೇ ಸ್ಥಾನವನ್ನು ಪಡೆದರು, ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶ್ರೀಲಂಕಾದ ಆಟಗಾರ್ತಿಯ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ.