ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೈಂದೂರು: ಮೆಸ್ಕಾಂ ಲೈನ್ ಮ್ಯಾನ್ ಲೋಕಾಯುಕ್ತ ಬಲೆಗೆ

ಬೈಂದೂರು:ಜು 4.: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ 2,000 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ರಮೇಶ್ ಲಂಚ ಸ್ವೀಕರಿಸುತ್ತಿದ್ದ. ಮರ ಕಡಿಯುವ ಸಂದರ್ಭ ಲೈನ್ ಕಟ್ ಮಾಡಿಕೊಡುವಂತೆ ಕುಸುಮಾ ಎಂಬವರು ಮನವಿ ಮಾಡಿದ್ದರು. ಅವರಿಂದ ಲಂಚ ಪಡೆಯುತ್ತಿದ್ದಾಗ ಡಿವೈಎಸ್ ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಜಯರಾಮ್ ಗೌಡ ಅವರ ತಂಡ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment