Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್,  ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

No Comments

Leave A Comment