ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾಣಿಯೂರುಶ್ರೀ ತಿರುಪತಿ ಭೇಟಿ
ಉಡುಪಿ: ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಮ್ಮ ಶಿಷ್ಯ ವೃಂದದವರೊಂದಿಗೆ ತಿರುಪತಿ ಶ್ರೀ ವೆಂಕಟೇಶನಕ್ಕೆ ತೆರಳಿ ದೇವರ ದರ್ಶನ ಪಡೆದರು.
ಟಿಟಿಡಿ ವತಿಯಿಂದ ಶ್ರೀಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ, ಶಿಷ್ಟಾಚಾರ ಪ್ರಕಾರ ಅವರಿಗೆ ಅದ್ದೂರಿ ಸ್ವಾಗತ ನೀಡಿದರು.