Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ನಾಳೆ ಬಜೆಟ್ ಮುಗಿದ ತಕ್ಷಣ ಉಡುಪಿಗೆ ಭೇಟಿ- ಸಚಿವೆ ಹೆಬ್ಬಾಳ್ಕರ್

ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದರು. ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಮಳೆಹಾನಿ ಪರಿಹಾರಕ್ಕೆ ತೊಂದರೆ ಇಲ್ಲ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಉಡುಪಿಗೆ ಹೋಗಿ ಬಂದ ನಂತರ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡ್ತೇನೆ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಕಡ್ಡಾಯ ಎಂದು ಹೇಳಿದರು.

No Comments

Leave A Comment