``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್‌ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು ಚಕ್ರಗಳ ವಾಹನಗಳನ್ನು ಬಳಸಲಾಗುತ್ತಿದೆ ಎಂದು ಶಂಕಿಸಿ ಜನರ ಗುಂಪೊಂದು ಎರಡು ಖಾಸಗಿ ವಾಹನಗಳನ್ನು ಸುಟ್ಟು ಹಾಕಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಶುಕ್ರವಾರ ತಡರಾತ್ರಿ ಇಂಫಾಲ್ ಪಶ್ಚಿಮ ಜಿಲ್ಲೆಯ ಯಂಗಂಗ್‌ಪೋಕ್ಪಿ ಬಳಿಯ ಲೈಕೋಟ್‌ನಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಬಿಷ್ಣುಪುರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಣಿಪುರ ಪೊಲೀಸ್ ಕಮಾಂಡೋ ಸೇರಿದಂತೆ ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಈ ಘಟನೆಗಳು ಸಂಭವಿಸಿವೆ.

No Comments

Leave A Comment