Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಅನರ್ಹತೆ ಪ್ರಕರಣ: ಶಿಂಧೆ, ಉದ್ಧವ್ ಬಣದ ಶಾಸಕರಿಗೆ ನೋಟಿಸ್ ನೀಡಿದ ಮಹಾ ಸ್ಪೀಕರ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶನಿವಾರ ಹೇಳಿದ್ದಾರೆ.

ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ ಪ್ರತಿಯನ್ನು ಸ್ವೀಕರಿಸಿದ್ದೇನೆ ಮತ್ತು ಸಿಎಂ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ವಿಚಾರಣೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ನಾರ್ವೇಕರ್ ಹೇಳಿದ ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ.

ಈ ವಾರದ ಆರಂಭದಲ್ಲಿ, ಶಿವಸೇನೆ(ಯುಬಿಟಿ) ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ವಿಧಾನಸಭೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಅವಿಭಜಿತ ಶಿವಸೇನೆಯ ಮುಖ್ಯ ಸಚೇತಕರಾಗಿದ್ದ ಶಾಸಕ ಸುನೀಲ್ ಪ್ರಭು ಅವರು ಕಳೆದ ವರ್ಷ, ಶಿಂಧೆ ಮತ್ತು ಇತರ 15 ಶಾಸಕರು ಬಂಡಾಯವೆದ್ದು, ಜೂನ್ 2022ರಲ್ಲಿ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಿದ ನಂತರ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

No Comments

Leave A Comment